ಹೊಸದಿಗಂತ ವರದಿ ಕಲಬುರಗಿ: 

ಜೀವನದಲ್ಲಿ ಜುಗುಪ್ಸೆಗೊಂಡು ತಾಯಿ ಮತ್ತು ಮಗಳು ಜಿಲ್ಲೆಯ ಶಹಾಬಾದ್ ಬಳಿಯ ಕಾಗಿಣಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ತಾಯಿ ಸುಮಲತಾ (45), ಹಾಗೂ ಮಗಳು ವರ್ಷಾ (22) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳಾಗಿದ್ದು, ಆತ್ಮಹತ್ಯೆ ಮಾಡಿಕೊಂಡ ತಾಯಿ ಮಗಳು ಕಲಬುರಗಿಯ ಎಂ.ಬಿ.ನಗರ ಬಡಾವಣೆಯ ನಿವಾಸಿಗಳಾಗಿದ್ದಾರೆ.

ಸೋಮವಾರ ಸಾಯಂಕಾಲದಿಂದ ನಾಪತ್ತೆಯಾಗಿದ್ದು, ರಾತ್ರಿ ಕಾಗಿಣಾ ನದಿಗೆ ಹಾರಿ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಶಹಾಬಾದ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

The post ಜೀವನದಲ್ಲಿ ಜುಗುಪ್ಸೆ: ನದಿಗೆ ಹಾರಿ ತಾಯಿ ಮಗಳು ಆತ್ಮಹತ್ಯೆ appeared first on HosadiganthaWeb.

Leave a Reply

Your email address will not be published. Required fields are marked *